HomeKarnatakaBIG NEWS: ಪಕ್ಷ ತೊರೆಯುವ ವದಂತಿಗೆ ತೆರೆ ಎಳೆದ ಬಿಜೆಪಿ ನಾಯಕ; ಗುರುಮಿಟ್ಕಲ್ ಕ್ಷೇತ್ರದಿಂದ ತಾವೇ...

BIG NEWS: ಪಕ್ಷ ತೊರೆಯುವ ವದಂತಿಗೆ ತೆರೆ ಎಳೆದ ಬಿಜೆಪಿ ನಾಯಕ; ಗುರುಮಿಟ್ಕಲ್ ಕ್ಷೇತ್ರದಿಂದ ತಾವೇ ಅಭ್ಯರ್ಥಿ ಎಂದ ಬಾಬುರಾವ್ ಚಿಂಚನಸೂರ್

ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳಿಗೆ ಬಾಬುರಾವ್ ಚಿಂಚನಸೂರ್ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ತೊರೆಯುವುದಾಗಿ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಬಾಬುರಾವ್ ಚಿಂಚನಸೂರ್ ಈ ಸಂದರ್ಭದಲ್ಲಿ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular