HomeIndiaSHOCKING: ಡಾಬಾದಲ್ಲಿದ್ದ ಫ್ರಿಜ್ ನಲ್ಲಿ ಬಾಲಕಿ ಶವ ಪತ್ತೆ: ಮದುವೆಯಾಗೆಂದ ಹುಡುಗಿ ಕೊಂದ ಕಿರಾತಕ

SHOCKING: ಡಾಬಾದಲ್ಲಿದ್ದ ಫ್ರಿಜ್ ನಲ್ಲಿ ಬಾಲಕಿ ಶವ ಪತ್ತೆ: ಮದುವೆಯಾಗೆಂದ ಹುಡುಗಿ ಕೊಂದ ಕಿರಾತಕ

ನವದೆಹಲಿ: ನಜಾಫ್‌ ಗಢ್‌ ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ತನ್ನ ಡಾಬಾದಲ್ಲಿ ಬಾಲಕಿಯನ್ನು ಕೊಂದು ಶವವನ್ನು ಫ್ರಿಡ್ಜ್‌ ನಲ್ಲಿ ಸಂಗ್ರಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.

ಮೂಲಗಳ ಪ್ರಕಾರ, ಕಾಶ್ಮೀರಿ ಗೇಟ್ ಐಎಸ್‌ಬಿಟಿ ಬಳಿ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಆರೋಪಿಯನ್ನು ಸಾಹಿಲ್ ಗೆಹ್ಲೋಟ್(26) ಎಂದು ಗುರುತಿಸಲಾಗಿದೆ. ಆರೋಪಿ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ತನ್ನ ಧಾಬಾದ ಫ್ರಿಡ್ಜ್‌ ನಲ್ಲಿ ಶವವನ್ನು ಬಚ್ಚಿಟ್ಟಿದ್ದ. ಮಂಗಳವಾರ ಪೊಲೀಸರು ಡಾಬಾದಲ್ಲಿ ಫ್ರಿಡ್ಜ್‌ ನಲ್ಲಿ ಬಾಲಕಿಯ ಶವವನ್ನು ಪತ್ತೆ ಮಾಡಿದ ನಂತರ ಆತನನ್ನು ಬಂಧಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಮತ್ತು ಹುಡುಗಿ ಪರಸ್ಪರ ಸಂಬಂಧ ಹೊಂದಿದ್ದರು. ತನ್ನ ಮದುವೆಯ ಪ್ರಸ್ತಾಪ ತಿರಸ್ಕರಿಸಿದ ನಂತರ ಆರೋಪಿಯು ಹುಡುಗಿಯನ್ನು ಕೊಂದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular