HomeLatest NewsBIG NEWS: ಭಾರತೀಯ ಕ್ರಿಕೆಟ್ ಆಟಗಾರರ ಬಗ್ಗೆ ಶಾಕಿಂಗ್ ಮಾಹಿತಿ ಬಹಿರಂಗಪಡಿಸಿದ ಚೇತನ್ ಶರ್ಮಾ

BIG NEWS: ಭಾರತೀಯ ಕ್ರಿಕೆಟ್ ಆಟಗಾರರ ಬಗ್ಗೆ ಶಾಕಿಂಗ್ ಮಾಹಿತಿ ಬಹಿರಂಗಪಡಿಸಿದ ಚೇತನ್ ಶರ್ಮಾ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಆಘಾತಕಾರಿ ಸತ್ಯವನ್ನು ಹೊರಹಾಕಿದ ಚೇತನ್ ಶರ್ಮಾ ಆಟಗಾರರು ಫಿಟ್ ಆಗಲು ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಅರ್ಧ ಫಿಟ್ ಆಗಿದ್ದರೂ ಶೇಕಡ 100ರಷ್ಟು ಫಿಟ್ ಆಗಲು ನಿಷೇಧಿತ ಚುಚ್ಚುಮದ್ದು ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಬಹಿರಂಗಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಚುಚ್ಚುಮದ್ದುಗಳಲ್ಲಿ ಔಷಧವಿದ್ದು, ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬೀಳುವುದಿಲ್ಲ ಎಂದು ತಿಳಿದುಬಂದಿದೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು 80% ಫಿಟ್ ಆಗಿದ್ದರೂ ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ. 100% ಫಿಟ್ ಆಗುತ್ತಾರೆ. ಇವು ನೋವು ನಿವಾರಕಗಳಲ್ಲ. ಈ ಚುಚ್ಚುಮದ್ದುಗಳು ಡೋಪ್ ಟೆಸ್ಟ್‌ ನಲ್ಲಿ ಸಿಕ್ಕಿಹಾಕಿಕೊಳ್ಳದ ಡ್ರಗ್ ಅನ್ನು ಒಳಗೊಂಡಿವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular