ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಿಸಿರುವ ಕುರಿತಾಗಿ ಅಗತ್ಯ ದಾಖಲೆಗಳ ಸಹಿತ ಮಾಹಿತಿ ನೀಡದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದೆ. ಎರಡು ವಾರದಲ್ಲಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಬೇಕು ಎಂದು 2019 ರ ಆಗಸ್ಟ್ 28ರಂದು ಹೈಕೋರ್ಟ್ ಆದೇಶ ಹೊರಡಿಸಿದ್ದರೂ ಪಾಲನೆಯಾಗಿಲ್ಲ. ವಿಳಂಬಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಉನ್ನತ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದರೆ ಸಮವಸ್ತ್ರ ಹೇಗೆ ಬರುವುದಿಲ್ಲ ಎಂಬುದನ್ನು ನೋಡುತ್ತೇವೆ ಎಂದು ತರಾಟೆಗೆ ತೆಗೆದುಕೊಂಡಿದ್ದು, 2 ವಾರದಲ್ಲಿ ವರದಿ ಸಲ್ಲಿಸಲು ಸೂಚಿಸಿದೆ.