HomeKarnatakaBIG NEWS: ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಟಾಂಗ್

BIG NEWS: ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಟಾಂಗ್

ಬೆಂಗಳೂರು: ಅಧಿಕಾರಕ್ಕೆ ಬಂದರೆ ಬಿಜೆಪಿ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ, ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರು ಜೈಲಿಗೆ ಹೋಗುವುದನ್ನು ಮೊದಲು ತಪ್ಪಿಸಿಕೊಳ್ಳಲಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನಾಯಕರು ಜಾಮೀನು ಪಡೆದು ಮೊದಲು ರಕ್ಷಣೆ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು.

ಕಳೆದ ಚುನಾವಣೆ ವೇಳೆ ಮಾಡಿದ್ದ ಕರ್ಮಕಾಂಡವನ್ನು ಕಾಂಗ್ರೆಸ್ ನವರು ನೆನಪಿಸಿಕೊಳ್ಳುತ್ತಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡುವುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್ ನಾಯಕರ ಹೇಳಿಕೆಯಿಂದಲೇ ಅವರ ಅಜೆಂಡಾ ಸ್ಪಷ್ಟವಾಗುತ್ತಿದೆ. ನಮ್ಮ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದರು, 40% ಕಮಿಷನ್ ಬಗ್ಗೆ ಇನ್ನೂ ಸಾಬೀತು ಮಾಡಿಲ್ಲ, ಕೋರ್ಟ್ ನಲ್ಲಿ ಕೇಸ್ ದಾಖಲಿಸುತ್ತೇವೆ ಅಂದ್ರು, ಇನ್ನೂ ಕೇಸ್ ಹಾಕಿಲ್ಲ. ಮೊದಲು ಕಾಂಗ್ರೆಸ್ ನವರು ತಮ್ಮ ಕಾಲದ ಟೆಂಡರ್ ಅಕ್ರಮದ ಬಗ್ಗೆ ಉತ್ತರಿಸಲಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular