HomeKarnatakaBIG NEWS: ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಶೃಂಗೇರಿ ಮಠಕ್ಕೆ ಜೆ.ಪಿ ನಡ್ಡಾ ಭೇಟಿ; ಜಗದ್ಗುರುಗಳ ಭೇಟಿಗೆ...

BIG NEWS: ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಶೃಂಗೇರಿ ಮಠಕ್ಕೆ ಜೆ.ಪಿ ನಡ್ಡಾ ಭೇಟಿ; ಜಗದ್ಗುರುಗಳ ಭೇಟಿಗೆ ಸಮಯ ಕೇಳಿದ BJP ರಾಷ್ಟ್ರಾಧ್ಯಕ್ಷ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಫೆಬ್ರವರಿ 20ರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶರದಾಂಬಾ ಮಠಕ್ಕೆ ಜೆ.ಪಿ ನಡ್ಡಾ ಆಗಮಿಸಲಿದ್ದಾರೆ. ಶೃಂಗೇರಿ ಶಾರದಾಂಬೆಯ ದರ್ಶನದ ಬಳಿಕ ಜಗದ್ಗುರುಗಳ ಭೇಟಿ ಮಾಡಲಿದ್ದಾರೆ.

ಜಗದ್ಗುರುಗಳ ಭೇಟಿಗಾಗಿ 20 ನಿಮಿಷಗಳ ಕಾಲ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ್ದವರ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬೆನ್ನಲ್ಲೇ ಜೆ.ಪಿ.ನಡ್ಡಾ ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular