HomeKarnatakaBIG NEWS: ಯಡಿಯೂರಪ್ಪನವರಿಗೆ ವಯಸ್ಸಿನಿಂದ ಅರಳುಮರಳಾಗಿದೆ; ಸಿದ್ದರಾಮಯ್ಯ ವಾಗ್ದಾಳಿ

BIG NEWS: ಯಡಿಯೂರಪ್ಪನವರಿಗೆ ವಯಸ್ಸಿನಿಂದ ಅರಳುಮರಳಾಗಿದೆ; ಸಿದ್ದರಾಮಯ್ಯ ವಾಗ್ದಾಳಿ

ಚಿತ್ರದುರ್ಗ: ಸರ್ಕಾರದ ಟೆಂಡರ್ ನಲ್ಲಿ ಗೋಲ್ ಮಾಲ್ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರು, ಹುಚ್ಚರು, ತಲೆ ತಿರುಕರು ಎಂದು ಕಿಡಿಕಾರಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪಗೆ ವಯಸ್ಸಿನಿಂದಾಗಿ ಅರುಳುಮರುಳಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಇಲಾಖಾವಾರು ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಯುತ್ತಿದೆ. ಹಣ ತೆಗೆದುಕೊಳ್ಳುವುದನ್ನು ಫೋಟೋ ತೆಗೆದು ತೋರಿಸಬೇಕಾ? ಎಂದು ಪ್ರಶ್ನಿಸಿದ್ದಾರೆ.

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪತ್ರ ಬರೆದು ಹೇಳಿದ್ದಾರೆ. ನೀರಾವರಿ ಯೋಜನೆ ಟೆಂಡರ್ ನಲ್ಲಿ ಅಕ್ರಮ ನಡೆದಿದೆ. ತಾರಾತುರಿ ಟೆಂಡರ್ ಕರೆದು ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದರು. ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ. ನನ್ನ ಆಡಳಿತದಲ್ಲಿ ಅಕ್ರಮ ನಡೆದಿದ್ದರೆ ಬಿಜೆಪಿಯವರು ಕಣ್ಮುಚ್ಚಿ ಕುಳಿತಿದ್ದರಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular