ಮಾನವೀಯತೆ ಮರೆತ ಜನರ ಮತ್ತೊಂದು ಶಾಕಿಂಗ್‌ ವಿಡಿಯೋ ವೈರಲ್

ರಸ್ತೆಯಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಗಲಾಟೆಯಲ್ಲಿ ಓರ್ವನ ಹತ್ಯೆಯಾಗಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ಹೊಡೆದಾಟದ ನಂತರ ವ್ಯಕ್ತಿಯೊಬ್ಬನನ್ನು ಇರಿದು ಕೊಂದಿರುವ ಆಘಾತಕಾರಿ ವಿಡಿಯೋ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿದೆ.

ದೆಹಲಿಯ ನಂಗ್ಲೋಯ್ ಪ್ರದೇಶದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಮೃತನನ್ನು ಸಾಹಿಲ್ ಮಲಿಕ್ ಎಂದು ಗುರುತಿಸಲಾಗಿದ್ದು, ನಂಗ್ಲೋಯ್ ಮೆಟ್ರೋ ನಿಲ್ದಾಣದ ಬಳಿ ಮಿನಿಬಸ್ ಚಾಲಕನಿಗೆ ಬೈಕ್ ಸ್ಪರ್ಶಿಸಿದಾಗ ಗಲಾಟೆ ಶುರುವಾಯಿತು. ಘಟನೆಯಲ್ಲಿ ಮೃತ ಸಾಹಿಲ್ ಸಹೋದರನಿಗೆ ಸಣ್ಣಪುಟ್ಟ ಗಾಯವಾಗಿವೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಜನನಿಬಿಡ ರಸ್ತೆಯಲ್ಲಿ ಒಬ್ಬ ವ್ಯಕ್ತಿಯನ್ನು ಹಿಂಬಾಲಿಸುತ್ತಿರುವುದನ್ನು ನೋಡಬಹುದು. ಬಳಿಕ ಆತನನ್ನು ಹಿಂಬಾಲಿಸಿದ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಬೇಸರದ ಸಂಗತಿಯೆಂದರೆ ಸಂತ್ರಸ್ತನ ರಕ್ಷಣೆಗೆ ರಸ್ತೆಯಲ್ಲಿ ಜನರೂ ಮಧ್ಯಪ್ರವೇಶಿಸಲಿಲ್ಲ.‌

https://twitter.com/PrathameshK98/status/1625694973697069057

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read