
ಸಿ.ಎಸ್. ಸೋಮೇಗೌಡ ಎಂಬವರಿಗೆ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ವೈ.ಎಸ್.ವಿ. ದತ್ತಾ ಅವರಿಗೆ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು, ವೈ.ಎಸ್.ವಿ. ದತ್ತಾ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

