alex Certify BIG NEWS: ತ್ರಿಪುರ ವಿಧಾನಸಭೆಗಿಂದು ಮತದಾನ; ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತ್ರಿಪುರ ವಿಧಾನಸಭೆಗಿಂದು ಮತದಾನ; ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು

60 ಸದಸ್ಯರ ಬಲ ಹೊಂದಿರುವ ತ್ರಿಪುರ ವಿಧಾನಸಭೆಗೆ ಇಂದು ಮತದಾನ ನಡೆಯಲಿದ್ದು, ಆಡಳಿತರೂಢ ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರಕ್ಕೇರಲು ಕಸರತ್ತು ನಡೆಸಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ 25 ವರ್ಷಗಳ ಎಡ ಪಕ್ಷಗಳ ಆಡಳಿತಕ್ಕೆ ಅಂತ್ಯ ಹಾಡಿದ್ದ ಬಿಜೆಪಿ, ಈಗ ಮತ್ತೊಮ್ಮೆ ಅಧಿಕಾರ ಪಡೆಯಲು ಹವಣಿಸುತ್ತಿದೆ.

ಆಡಳಿತ ವಿರೋಧಿ ಅಲೆಯನ್ನು ಎನ್ ಕ್ಯಾಶ್ ಮಾಡಿಕೊಳ್ಳಲು ಎಡ ಪಕ್ಷಗಳು ಪ್ರಯತ್ನ ನಡೆಸಿದ್ದು ಇದರಲ್ಲಿ ಎಷ್ಟರಮಟ್ಟಿಗೆ ಯಶಸ್ಸು ಕಾಣಲಿವೆ ಎಂಬುದನ್ನು ಕಾದು ನೋಡಬೇಕಿದೆ.

60 ಕ್ಷೇತ್ರಗಳ ಪೈಕಿ ಬಿಜೆಪಿ 55 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದು, ಅದರ ಮಿತ್ರ ಪಕ್ಷ ಐಪಿಎಫ್‌ಟಿ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಸಿಪಿಎಂ 47, ಕಾಂಗ್ರೆಸ್ 13, ಟಿಎಂಸಿ 28 ಹಾಗೂ ಪಕ್ಷೇತರರು 58 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದಾರೆ.

ಮೇಘಾಲಯ, ನಾಗಾಲ್ಯಾಂಡ್ ವಿಧಾನಸಭೆಗೆ ಫೆಬ್ರವರಿ 27ರಂದು ಮತದಾನ ನಡೆಯಲಿದ್ದು, ಆ ಬಳಿಕ ತ್ರಿಪುರ ಸೇರಿದಂತೆ ಮೂರು ರಾಜ್ಯಗಳ ಫಲಿತಾಂಶ ಮಾರ್ಚ್ 2ಕ್ಕೆ ಪ್ರಕಟಗೊಳ್ಳಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...