ಬ್ರಿಟನ್, ಜಪಾನ್, ಇಂಡೋನೇಷ್ಯಾ ಮಾದರಿಯಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗೆ ಅವರು ಕೆಲಸ ಮಾಡುವ ಕಚೇರಿಗಳಲ್ಲಿ ಮುಟ್ಟಿನ ರಜೆ ನೀಡಲು ನಿಯಮ ರೂಪಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ದೆಹಲಿ ನಿವಾಸಿ ಶೈಲೇಂದ್ರ ಮಣಿ ತ್ರಿಪಾಠಿ ಎಂಬವರು ಈ ಅರ್ಜಿ ಸಲ್ಲಿಸಿದ್ದು, ಮುಟ್ಟಿನ ರಜೆ ನೀಡುವ ಕುರಿತಂತೆ ನಿಯಮ ರೂಪಿಸುವ ನಿಟ್ಟಿನಲ್ಲಿ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಎದುರು ಬುಧವಾರದಂದು ಈ ಅರ್ಜಿ ಕುರಿತು ಪ್ರಸ್ತಾಪಿಸಲಾಗಿದ್ದು, ವಿಚಾರಣೆಯನ್ನು ಫೆಬ್ರವರಿ 24 ರಂದು ನಡೆಸಲು ಒಪ್ಪಿಗೆ ಸೂಚಿಸಲಾಗಿದೆ.