HomeKarnatakaBIG NEWS: ಕಲುಷಿತ ನೀರು ಸೇವನೆ; ಸಾವಿನ ಸಂಖ್ಯೆ ಮೂರಕ್ಕೇರಿಕೆ

BIG NEWS: ಕಲುಷಿತ ನೀರು ಸೇವನೆ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಯಾದಗಿರಿ: ಯಾದಗಿರಿಯ ಗುರುಮಿಠಕಲ್ ನಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದೆ.

ತಡರಾತ್ರಿ ನರಸಮ್ಮ ಎಂಬ ಮತ್ತೋರ್ವ ಮಹಿಳೆ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ್ದಾರೆ. ಕಲುಷಿತ ನೀರಿನಿಂದಾಗಿ ಕಳೆದ ಮೂರು ದಿನಗಳಿಂದ ವಾಂತಿ-ಭೇದಿಯಿಂದ ಬಳಲುತ್ತಿದ್ದ ಮಹಿಳೆಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ ಮಹಿಳೆ ಸಾವನ್ನಪ್ಪಿದ್ದಾರೆ.

ಕಲುಷಿತ ನೀರು ಸೇವಿಸಿ ನಿನ್ನೆ 35 ವರ್ಷದ ಸಾವಿತ್ರಮ್ಮ ಹಾಗೂ 72 ವರ್ಷದ ಸಾಯಮ್ಮ ಎಂಬ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ಮಹಿಳೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕಲುಷಿತ ನೀರಿನಿಂದ ಇಂದು ಮತ್ತೆ 7 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular