HomeKarnatakaBIG NEWS: ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ; ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ್

BIG NEWS: ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ; ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ್

ತುಮಕೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ 10 ನಾಯಕರು ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನ ಮಧುಗಿರಿಯಲ್ಲಿ ಮಾತನಾಡಿದ ಪರಮೇಶ್ವರ್, ಕಾಂಗ್ರೆಸ್ ನಲ್ಲಿ ಜಾತಿಯಾಧಾರಿತ ಮುಖ್ಯಮಂತ್ರಿ ಆಯ್ಕೆ ಮಾಡಲ್ಲ. ಆ ಸಂದರ್ಭಕ್ಕೆ ಯಾರು ಸಮರ್ಥರಿದ್ದಾರೆ ಅವರನ್ನು ಸಿಎಂ ಮಾಡುತ್ತಾರೆ. ಪಕ್ಷದ ಧ್ಯೇಯೋದ್ದೇಶ ಮುನ್ನೆಡೆಸುವ ಸಾಮರ್ಥ್ಯ ಇರುವವರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ 10 ಜನ ರೇಸ್ ನಲ್ಲಿದ್ದಾರೆ. ಅದರಲ್ಲಿ ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ. ಆದರೆ ಸಿಎಂ ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular