HomeKarnatakaBIG NEWS: ಸಿದ್ದರಾಮಯ್ಯರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು; ವಿವಾದ ಸೃಷ್ಟಿಸಿದ ಸಚಿವ ಅಶ್ವತ್ಥನಾರಾಯಣ ಹೇಳಿಕೆ

BIG NEWS: ಸಿದ್ದರಾಮಯ್ಯರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು; ವಿವಾದ ಸೃಷ್ಟಿಸಿದ ಸಚಿವ ಅಶ್ವತ್ಥನಾರಾಯಣ ಹೇಳಿಕೆ

ಮಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಾ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಟಿಪ್ಪು ವಿಚಾರವನ್ನು ಪ್ರಸ್ತಾಪಿಸಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಟಿಪ್ಪುವಿನಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.

ಸಾತನೂರಿನಲ್ಲಿ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ಟಿಪ್ಪು ವಿರುದ್ಧ ವಾಗ್ದಾಳಿ ನಡೆಸುತ್ತಾ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೂ ಕೆಂಡಕಾರಿದ್ದಾರೆ. ಸಿದ್ದರಾಮಯ್ಯರನ್ನು ಟಿಪ್ಪು ಹೊಡೆದಂತೆ ಹೊಡೆದು ಹಾಕಬೇಕು ಎಂದು ಹೇಳುವ ಮೂಲಕ ಪ್ರಚೋದನಕಾರಿ ಮಾತನಾಡಿದ್ದಾರೆ.

ಟಿಪ್ಪುವಿನಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು. ಇಲ್ಲದಿದ್ದರೆ ಸಿದ್ದರಾಮಯ್ಯ ಬಂದು ಬಿಡ್ತಾರೆ. ನಿಮಗೆ ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಹುರಿಗೌಡ, ನಂಜೇಗೌಡ ಏನು ಮಾಡಿದರು? ಹಾಗೆಯೇ ಇವರನ್ನು ಹೊಡೆದು ಹಾಕಬೇಕು ಎಂದು ಹೇಳಿದ್ದಾರೆ. ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular