HomeKarnatakaBIG NEWS: ನಾನು ಬಿಜೆಪಿ ಬಿಟ್ಟು ಹೋದರೆ ತಾಯಿಗೆ ದ್ರೋಹ ಮಾಡಿದಂತೆ; ಕಾಂಗ್ರೆಸ್ ಟಿಕೆಟ್ ಪಡೆಯುವವರು...

BIG NEWS: ನಾನು ಬಿಜೆಪಿ ಬಿಟ್ಟು ಹೋದರೆ ತಾಯಿಗೆ ದ್ರೋಹ ಮಾಡಿದಂತೆ; ಕಾಂಗ್ರೆಸ್ ಟಿಕೆಟ್ ಪಡೆಯುವವರು ಧಾರಾಳವಾಗಿ ಪಡೆಯಬಹುದು ಎಂದ ಆನಂದ್ ಸಿಂಗ್

ವಿಜಯನಗರ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಸಚಿವ ಆನಂದ್ ಸಿಂಗ್ ಟಕ್ಕರ್ ನೀಡಿದ್ದು, ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ಊಹಾಪೋಹ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಯಾವುದೇ ಕಾರಣಕ್ಕೂ ಅಡ್ಡಿಯಾಗಲ್ಲ. ಯಾರು ಬೇಕಾದ್ರು ಕಾಂಗ್ರೆಸ್ ಟಿಕೆಟ್ ಪಡೆದುಕೊಳ್ಳಬಹುದು. ನಾನು ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಯತ್ನಿಸುತ್ತಿದ್ದೇನೆ ಎಂಬುದು ಊಹಾಪೋಹ. ನಾನು ಬಿಜೆಪಿ ಬಿಟ್ಟು ಹೋಗಲ್ಲ, ಬಿಜೆಪಿ ಬಿಟ್ಟರೆ ನನ್ನ ತಾಯಿಗೆ ದ್ರೋಹ ಮಾಡಿದಂತೆ. ಬಿಜೆಪಿ ಹಾಗೂ ಯಡಿಯೂರಪ್ಪನವರಿಗೆ ನಾನು ದ್ರೋಹ ಮಾಡಲ್ಲ ಎಂದರು.

ನಾನು ಬಿಜೆಪಿ ಪಕ್ಷದಲ್ಲಿಯೇ ಮುಂದುವರೆಯುತ್ತೇನೆ. ಯಾವ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಟಿಕೆಟ್ ಪಡೆಯುವವರು ಧಾರಾಳವಾಗಿ ಟಿಕೆಟ್ ಪಡೆದುಕೊಳ್ಳಲಿ ಎಂದು ಸಚಿವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular