ಬೆಂಗಳೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ ಎಂಬ ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆ ಯತ್ನ ಕೇಸ್ ದಾಖಲಿಸಲಾಗಿದೆ.
ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ್ದ ಸಚಿವ ಅಶ್ವತ್ಥನಾರಾಯಣ, ಟಿಪ್ಪು ಹೊಡೆದಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆ ತೀವ್ರ ವಿವಾದಕ್ಕೀಡಾಗುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ ಈಗ ಸಚಿವರ ವಿರುದ್ಧ ಕಾಂಗ್ರೆಸ್ ಮುಖಂಡ ಮನೋಹರ್ ಮತ್ತಿತರರು ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ.