HomeCrimeಪತಿ ಮೇಲೆ ದುಷ್ಕರ್ಮಿಗಳ ಹಲ್ಲೆ; ನ್ಯಾಯ ಕೋರಿ ಗಾಯಾಳುವನ್ನು ಹೆಗಲ ಮೇಲೆ ಹೊತ್ತು SP ಕಚೇರಿಗೆ...

ಪತಿ ಮೇಲೆ ದುಷ್ಕರ್ಮಿಗಳ ಹಲ್ಲೆ; ನ್ಯಾಯ ಕೋರಿ ಗಾಯಾಳುವನ್ನು ಹೆಗಲ ಮೇಲೆ ಹೊತ್ತು SP ಕಚೇರಿಗೆ ತಂದ ಪತ್ನಿ

ತನ್ನ ಪತಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ದೂರಿದ ಪತ್ನಿ ನ್ಯಾಯ ಕೋರಿ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಶಾದೂಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸೋಹಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ಕೂಲಿ ಕಾರ್ಮಿಕ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಆತನ ಬಳಿ ಇದ್ದ ಹಣ ಕಿತ್ತುಕೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಆಕ್ರೋಶಗೊಂಡ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರೆತಂದಿದ್ದಾರೆ. ಬಳಿಕ ಇವರ ದೂರು ಆಲಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುಕೇಶ್ ವೈಶ್ಯ, ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular