HomeKarnatakaಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 28ರಂದು ಕಾಮೆಡ್ –ಕೆ ಪ್ರವೇಶ ಪರೀಕ್ಷೆ

ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 28ರಂದು ಕಾಮೆಡ್ –ಕೆ ಪ್ರವೇಶ ಪರೀಕ್ಷೆ

ಬೆಂಗಳೂರು: ಖಾಸಗಿ ಕಾಲೇಜು ಮತ್ತು ವಿವಿಗಳಲ್ಲಿರುವ ಮ್ಯಾನೇಜ್ಮೆಂಟ್ ಕೋಟಾ ಇಂಜಿನಿಯರಿಂಗ್ ಸೀಟುಗಳ ಭರ್ತಿಗೆ 2023 ನೇ ಸಾಲಿನ ಕಾಮೆಡ್ -ಕೆ ಪರೀಕ್ಷೆ ಮೇ 28ರಂದು ನಡೆಯಲಿದೆ.

ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಏಪ್ರಿಲ್ 24 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕವೇ ಪರೀಕ್ಷೆ ನಡೆಯಲಿದ್ದು, ರಾಜ್ಯದ 150 ಇಂಜಿನಿಯರಿಂಗ್ ಕಾಲೇಜು 50 ಕ್ಕೂ ಹೆಚ್ಚು ಖಾಸಗಿ ಮತ್ತು ಡೀಮ್ಡ್ ವಿವಿಗಳಲ್ಲಿ ಖಾಲಿ ಇರುವ ಸುಮಾರು 20 ಸಾವಿರ ಸೀಟುಗಳಿಗೆ ಪರೀಕ್ಷೆ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 28ರ ಭಾನುವಾರ ಕಾಮೆಡ್ –ಕೆ, ಯುಗೇಟ್ ಮತ್ತು ಯುನಿಗೇಜ್ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು ಕಾಮೆಡ್ –ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಕುಮಾರ್ ಹೇಳಿದ್ದಾರೆ. ದೇಶದಾದ್ಯಂತ 150ಕ್ಕೂ ಹೆಚ್ಚು ನಗರಗಳಲ್ಲಿ 400 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. www.comedk.org ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular