
ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ಪ್ರದೇಶಕ್ಕೆ ತಮಿಳುನಾಡು ಬೇಟೆಗಾರರು ಅಕ್ರಮವಾಗಿ ಪ್ರವೇಶಿಸಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಕರ್ನಾಟಕ ಅರಣ್ಯ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಕರ್ನಾಟಕ ಅರಣ್ಯ ಸಿಬ್ಬಂದಿಗಳು, ಬೇಟೆಗಾರರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಅರಣ್ಯಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.

