ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ಜಾರಿ ಕುರಿತಂತೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ.
ಹೀಗಾಗಿ ರಾಜ್ಯದ 5.50 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರು ಏಳನೇ ವೇತನ ಆಯೋಗ ಜಾರಿಯಾಗುವುದೋ ಇಲ್ಲವೋ ಎಂಬ ಆತಂಕದಲ್ಲಿದ್ದರು. ಇದೀಗ ಅವರುಗಳಿಗೆ ಮುಖ್ಯಮಂತ್ರಿಗಳು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಪ್ರಸಕ್ತ ಹಣಕಾಸು ವರ್ಷದಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದ್ದಾರೆ.
ಬಜೆಟ್ ನಲ್ಲಿ ನಾನು ಈ ಕುರಿತು ಪ್ರಸ್ತಾಪ ಮಾಡಿಲ್ಲ. ಆದರೆ 2022-23 ನೇ ಸಾಲಿನ ಬಜೆಟ್ ನಲ್ಲಿ ವೇತನ ಹೆಚ್ಚಳಕ್ಕಾಗಿ 6,000 ಕೋಟಿ ರೂಪಾಯಿ ಹೆಚ್ಚುವರಿ ಹಣ ಮೀಸಲಿಡಲಾಗಿದೆ. ಅಗತ್ಯವಿದ್ದರೆ ಹೆಚ್ಚುವರಿ ಹಣವನ್ನು ಪೂರಕ ಅಂದಾಜಿನಲ್ಲಿ ಒದಗಿಸಲಾಗುತ್ತದೆ ಎಂದರು.