alex Certify ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ‘ನಮ್ಮ ನೆಲೆ’ ಯೋಜನೆಯಡಿ 10,000 ಸೈಟ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ‘ನಮ್ಮ ನೆಲೆ’ ಯೋಜನೆಯಡಿ 10,000 ಸೈಟ್ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ‘ನಮ್ಮ ನೆಲೆ’ ಯೋಜನೆಯಡಿ 10,000 ನಿವೇಶನ ನೀಡಲಾಗುವುದು.

ಕರ್ನಾಟಕ ಗೃಹ ಮಂಡಳಿ ವತಿಯಿಂದ 30,000 ಸ್ವತ್ತು ನಿವೇಶನ ನೀಡಿಕೆ, ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಸೇರಿದಂತೆ ಹಲವು ಯೋಜನೆ ಪ್ರಕಟಿಸಲಾಗಿದೆ. ಈ ವರ್ಷ 5000 ಕೋಟಿ ರೂ. ವೆಚ್ಚದಲ್ಲಿ 5 ಲಕ್ಷ ಹೊಸ ಮನೆಗಳ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ 20,000 ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗುವುದು.

ಇದಲ್ಲದೇ, ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಪ್ರಸಕ್ತ ವರ್ಷದಲ್ಲಿ 500 ಕೋಟಿ ರೂ. ಅನುದಾನ ಒದಗಿಸಲಾಗುವುದು. ಸರ್ಕಾರಿ ಮಾಲೀಕತ್ವದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳ ಪೈಕಿ ಈ ವರ್ಷ 3.36 ಲಕ್ಷ ಕುಟುಂಬಗಳಿಗೆ ಭೂಮಾಲೀಕತ್ವ ಹಕ್ಕು ಪತ್ರ ಕೊಡಲಾಗುತ್ತದೆ.

ಕೆಹೆಚ್‌ಬಿ ವತಿಯಿಂದ ನಮ್ಮ ನೆಲೆ ಹೊಸ ಯೋಜನೆ ಅಡಿ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ 10,000 ನಿವೇಶನಗಳನ್ನು ಆರ್ಥಿಕ ದುರ್ಬಲ ವರ್ಗದವರಿಗೆ ಹಂಚಿಕೆ ಮಾಡಲಾಗುವುದು. ಸಫಾಯಿ ಕರ್ಮಚಾರಿಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...