ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಆಹಾರ ಇಲಾಖೆಗೆ ಸಂಬಂಧಿಸಿದಂತೆ ಹೊಸ ಯೋಜನೆ ಘೋಷಣೆ ಮಾಡದಿದ್ದರೂ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ವಿತರಿಸಲು ಸರ್ಕಾರ ಮುಂದಾಗಿದೆ.
ಕೇಂದ್ರದ ಐದು ಕೆಜಿ, ರಾಜ್ಯದ ಒಂದು ಕೆಜಿ ಸೇರಿ ಆರು ಕೆಜಿ ಅಕ್ಕಿ ನೀಡಲಾಗುವುದು. ಅನ್ನಭಾಗ್ಯ ಯೋಜನೆಯ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರ ವಹಿಸಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ಹೆಚ್ಚುವರಿ ಒಂದು ಕೆಜಿ ಅಕ್ಕಿ ವಿತರಿಸಲು ಬಜೆಟ್ ನಲ್ಲಿ 4,600 ಕೋಟಿ ಅನುದಾನ ಕಾಯ್ದಿರಿಸಿದೆ. ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅಡಿ ಕೇಂದ್ರ ಸರ್ಕಾರದಿಂದ 5 ಕೆಜಿ, ರಾಜ್ಯದ ಪಾಲಿನ ಒಂದು ಕೆಜಿ ಸೇರಿ ಆರು ಕೆಜಿ ಅಕ್ಕಿಯನ್ನು ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ ನೀಡಲಾಗುವುದು.