HomeKarnatakaಶುಭ ಸುದ್ದಿ: ಕಲ್ಯಾಣ ಕರ್ನಾಟಕದ ವಿವಿಧ ನೇಮಕಾತಿ ಜತೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ...

ಶುಭ ಸುದ್ದಿ: ಕಲ್ಯಾಣ ಕರ್ನಾಟಕದ ವಿವಿಧ ನೇಮಕಾತಿ ಜತೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಒಂದು ಲಕ್ಷ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ ನಾಗರೀಕರಿಗೆ ಉತ್ತಮ ಸೇವೆ ಒದಗಿಸಲು, ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಒಂದು ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮಹತ್ವದ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಕೂಡ ಭರ್ತಿ ಮಾಡಲಿದ್ದು, ಈ ಎಲ್ಲಾ ನೇಮಕಾತಿ ಪ್ರಕ್ರಿಯೆಯನ್ನು 2023 -24ನೇ ಸಾಲಿನಲ್ಲಿ ಪೂರ್ಣಗೊಳಿಸಿ ನೇಮಕಾತಿ ಆದೇಶ ನೀಡಲಾಗುತ್ತದೆ. ಆಡಳಿತದಲ್ಲಿ ದಕ್ಷತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಲಿದ್ದು, ಆಡಳಿತ ಸುಧಾರಣಾ ಆಯೋಗ ಸಲ್ಲಿಸಿದ 5 ವರದಿಗಳಲ್ಲಿ 3,630 ಇಲಾಖಾವಾರು ಶಿಫಾರಸುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು. ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆ ಬಲಪಡಿಸಲು ಹೆಚ್ಚುವರಿ 2000 ಹುದ್ದೆ ಸೃಜಿಸಲಾಗುವುದು. ರಾಜ್ಯ ಕೈಗಾರಿಕಾ ಭದ್ರತಾ ಪಡೆ ಬಲಪಡಿಸಲು ಒಂದು ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular