ಗದಗ: ಮಗನೇ ಕೊಡಲಿಯಿಂದ ಕೊಚ್ಚಿ ತಂದೆಯ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
ತಂದೆ ಮಲಕಸಾಬ ಮೃತಪಟ್ಟವರು ಎಂದು ಹೇಳಲಾಗಿದೆ. ಮಲಕಸಾಬ ಅವರನ್ನು ಮಗ ಮೌಲಾಸಾಬ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.