HomeKarnatakaBIG NEWS: ಹೃದಯಾಘಾತ; ಜೈಲಿನಲ್ಲಿಯೇ ಮೃತಪಟ್ಟ ಕೈದಿ

BIG NEWS: ಹೃದಯಾಘಾತ; ಜೈಲಿನಲ್ಲಿಯೇ ಮೃತಪಟ್ಟ ಕೈದಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಸೋಮಶೇಖರ್ ಮೃತ ಕೈದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನೇಕಲ್ ತಾಲೂಕಿನ ನಿವಾಸಿಯಾಗಿರುವ ಸೋಮಶೇಖರ್, 6 ವರ್ಷಗಳ ಹಿಂದೆ ಪ್ರಕರಣವೊಂದರಲ್ಲಿ ಜೈಲುಶಿಕ್ಷೆಗೆ ಒಳಗಾಗಿದ್ದ.

ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದ ಕೈದಿ ಸೋಮಶೇಖರ್ ಗೆ ಏಕಾಏಕಿ ಹೃದಯಾಘಾತವಾಗಿದೆ. ತಕ್ಷಣ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular