ಮಹಾ ಶಿವರಾತ್ರಿ ದಿನದಂದು ದೇಗುಲದ ಹೊರಗೆ ಹೂ ಮಾರಾಟ ಮಾಡುತ್ತಿದ್ದ ಬಡ ಮಹಿಳೆಗೆ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಈ ಮಹಿಳೆ ಗೋರಕ್ಪುರದ ಮುಕ್ತೇಶ್ವರನಾಥ ದೇಗುಲದ ಬಳಿ ಹೂವು ಮಾರಾಟ ಮಾಡುತ್ತಿದ್ದು, ಅದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇವರ ದರ್ಶನಕ್ಕಾಗಿ ಆಗಮಿಸುತ್ತಿದ್ದರು.
ಹೀಗಾಗಿ ಅಂಗಡಿ ತೆರವುಗೊಳಿಸುವಂತೆ ಒತ್ತಾಯಿಸಿದ ಅಧಿಕಾರಿ, ಮಹಿಳಾ ಪೊಲೀಸರಿದ್ದರೂ ಸಹ ಆಕೆಯನ್ನು ತಳ್ಳಿದ್ದಾರೆ. ಜೊತೆಗೆ ಹಲ್ಲೆ ಸಹ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ತಪ್ಪಿತಸ್ಥ ಪೊಲೀಸನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.