alex Certify ‘ವಸತಿ ಶಾಲೆ’ ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಸತಿ ಶಾಲೆ’ ಗಳಲ್ಲಿ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಇಲ್ಲಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣವನ್ನು ಪಿಯುಸಿ ವರೆಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದ್ದು, ಹೀಗಾಗಿ ಈ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ.

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಈ ವಿಷಯ ತಿಳಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ 530 ವಸತಿ ಶಾಲೆಗಳಲ್ಲಿ ಪಿಯುಸಿ ವರೆಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದಿದ್ದಾರೆ

ಇದರಿಂದಾಗಿ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...