HomeLatest Newsಜಡೇಜಾಗೆ 7 ವಿಕೆಟ್; ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಭಾರತಕ್ಕೆ ಜಯ: 6 ವಿಕೆಟ್...

ಜಡೇಜಾಗೆ 7 ವಿಕೆಟ್; ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಭಾರತಕ್ಕೆ ಜಯ: 6 ವಿಕೆಟ್ ಗೆಲವು; ಸರಣಿಯಲ್ಲಿ 2-0 ಮುನ್ನಡೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್ -ಗವಾಸ್ಕರ್ ಟೆಸ್ಟ್ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯ 2 ನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು, ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಎರಡನೇ ಇನ್ನಿಂಗ್ಸ್ ನಲ್ಲಿ 12 ಓವರ್ ಗಳಲ್ಲಿ ಒಂದು ವಿಕೆಟ್ ಗೆ 61 ರನ್ ಗಳಿಸಿದ ಆಸ್ಟ್ರೇಲಿಯಾ ಇಂದು ಆಟ ಮುಂದುವರೆಸಿದ್ದು ರವೀಂದ್ರ ಜಡೇಜಾ ಮಾರಕ ದಾಳಿಗೆ(7 ವಿಕೆಟ್) ತತ್ತರಿಸಿ ಆಸ್ಟ್ರೇಲಿಯಾ 113 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಗೆಲುವಿನ ಗುರಿ ಬೆನ್ನತ್ತಿದ ಭಾರತ 26.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಜಯಗಳಿಸಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 263/10, 2ನೇ ಇನ್ನಿಂಗ್ಸ್ 113/10

ಭಾರತ ಮೊದಲ ಇನ್ನಿಂಗ್ಸ್ 262/10, 2ನೇ ಇನ್ನಿಂಗ್ಸ್ 118/4

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular