ವಿದ್ಯಾರ್ಥಿನಿಗೆ ಬಲವಂತವಾಗಿ ಮುತ್ತಿಕ್ಕಲು ಯತ್ನ; ಯುವಕ ಜೈಲು ಪಾಲು

ವಿದ್ಯಾರ್ಥಿನಿಯನ್ನು ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಗೆ ಮುಂಬೈ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣ ನಡೆದ ಮೂರು ತಿಂಗಳೊಳಗೆ ಮುಕ್ತಾಯಗೊಂಡ ವಿಚಾರಣೆಯಲ್ಲಿ, ಖಾರ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ 19 ವರ್ಷದ ವಿದ್ಯಾರ್ಥಿಯನ್ನು ಬಲವಂತವಾಗಿ ಚುಂಬಿಸಲು ಯತ್ನಿಸಿದ 25 ವರ್ಷದ ಯುವಕನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಜೂನ್ 9 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆ ವಿಲೆ ಪಾರ್ಲೆಯಿಂದ ಬಾಂದ್ರಾಕ್ಕೆ ತನ್ನ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ತಪ್ಪಾಗಿ ಆಕೆ ಖಾರ್ ರೈಲ್ವೇ ನಿಲ್ದಾಣದಲ್ಲಿ ಇಳಿದಳು.

ಫೋನ್‌ನಲ್ಲಿ ಮಾತನಾಡುತ್ತಾ ಇನ್ನೊಂದು ರೈಲಿಗಾಗಿ ಆಕೆ ಕಾಯುತ್ತಿದ್ದಾಗ ಅವಳ ಹಿಂದಿನಿಂದ ಬಂದ ವ್ಯಕ್ತಿ ಅವಳನ್ನು ಚುಂಬಿಸಲು ಪ್ರಯತ್ನಿಸಿದ್ದ.

ಈ ವೇಳೆ ಆಕೆ ಎಚ್ಚರಗೊಂಡು ಕೂಗಿಕೊಂಡಿದ್ದು, ಸಹ ಪ್ರಯಾಣಿಕರು ಆತನನ್ನು ಹಿಡಿದು ಥಳಿಸಲು ಪ್ರಾರಂಭಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ದೂರು ದಾಖಲಿಸಲು ಬಾಂದ್ರಾ ಪೊಲೀಸ್ ಠಾಣೆಗೆ ಕರೆದೊಯ್ದು ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read