HomeKarnatakaBIG NEWS: ಬಿಜೆಪಿ ಮುಖಂಡ ಹೆಚ್.ಡಿ.ತಮ್ಮಯ್ಯ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

BIG NEWS: ಬಿಜೆಪಿ ಮುಖಂಡ ಹೆಚ್.ಡಿ.ತಮ್ಮಯ್ಯ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲೇ ಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯುತ್ತಿದೆ.

ಚಿಕ್ಕಮಗಳೂರಿನ ಬಿಜೆಪಿ ಮುಖಂಡ, ಲಿಂಗಾಯಿತ ಸಮುದಾಯದ ನಾಯಕ ಹೆಚ್.ಡಿ ತಮ್ಮಯ್ಯ ಹಾಗೂ ಅವರ ಅಪಾರ ಬೆಂಬಲಿಗರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಚಿಕ್ಕಮಗಳೂರು ಭಾಗದ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular