HomeIndiaಸಂಸದ ಅಸಾದುದ್ದೀನ್ ಓವೈಸಿ ಮನೆ ಮೇಲೆ ದಾಳಿ: ಕಲ್ಲು ತೂರಾಟ

ಸಂಸದ ಅಸಾದುದ್ದೀನ್ ಓವೈಸಿ ಮನೆ ಮೇಲೆ ದಾಳಿ: ಕಲ್ಲು ತೂರಾಟ

ನವದೆಹಲಿ:  ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ನಾಯಕ, ಸಂಸದ ಅಸಾದುದ್ದೀನ್ ಓವೈಸಿ ಅವರ ಮನೆ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ.

ಭಾನುವಾರ ರಾತ್ರಿ ರಾಜಧಾನಿಯಲ್ಲಿರುವ ಅವರ ಮನೆಯ ಕಿಟಕಿಗಳನ್ನು ಒಡೆದ ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಎಂಐಎಂ ಮುಖ್ಯಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಪರಿಚಿತ ಪುಂಡರು ತಮ್ಮ ದೆಹಲಿಯ ಮನೆಗೆ ಕಲ್ಲು ಎಸೆದಿದ್ದಾರೆ ಎಂದು ಹೇಳಿದ್ದಾರೆ.

ಸಂಜೆ 5.30ರ ಸುಮಾರಿಗೆ ಅಶೋಕ ರಸ್ತೆಯಲ್ಲಿರುವ ಎಐಎಂಐಎಂ ಮುಖ್ಯಸ್ಥರ ದೆಹಲಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ನಂತರ, ಹೆಚ್ಚುವರಿ ಡಿಸಿಪಿ ನೇತೃತ್ವದಲ್ಲಿ ದೆಹಲಿ ಪೊಲೀಸರ ತಂಡವು ಅವರ ಮನೆಗೆ ತೆರಳಿ ಅಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ದುಷ್ಕರ್ಮಿಗಳ ಗುಂಪೊಂದು ತಮ್ಮ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳನ್ನು ಹಾನಿಗೊಳಿಸಿದೆ ಎಂದು ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಓವೈಸಿ ಆರೋಪಿಸಿದ್ದಾರೆ.

ಇಂತಹ ದಾಳಿ ನಡೆದಿರುವುದು ಇದು ನಾಲ್ಕನೇ ಬಾರಿ, ನನ್ನ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳಿದ್ದು, ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular