HomeKarnatakaBIG NEWS: ಗೋಡಾನ್ ಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

BIG NEWS: ಗೋಡಾನ್ ಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಕೊಡಗು: ಫರ್ನಿಚರ್ ಗೋಡಾನ್ ಗೆ ಬೆಂಕಿ ಬಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಪ್ರಶಾಂತ್ ಫರ್ನಿಚರ್ ಗೋಡಾನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮುಂಜಾನೆ ಗೋಡಾನ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಗೋಡಾನ್ ನಲ್ಲಿದ್ದ ವಸ್ತುಗಳು ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾಗಿವೆ.

ನೋಡನೋಡುತ್ತಿದ್ದಂತೆ ಇಡೀ ಗೋಡಾನ್ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಹಬ್ಬಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಸತತ 5 ಗಂಟೆಗಳಿಂದ ಕಾರ್ಯಾಚಹ್ರಣೆ ನಡೆದಿದ್ದರು ಬೆಂಕಿ ತಹಬದಿಗೆ ಬಂದಿಲ್ಲ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular