ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ಜೋರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷದ ಅಧ್ಯಕ್ಷರಾಗಲು ನಾಲಾಯಕ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಅಭಿವೃದ್ಧಿ ವಿಚಾರಗಳನ್ನು ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಅಂತಾರೆ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರು ಧ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇಂತವರು ಅಧ್ಯಕ್ಷನಾಗಲು ಲಾಯಕ್ಕಿಲ್ಲ ಎಂದರು.
ಅಮಿತ್ ಶಾ ಅವರು ಟಿಪ್ಪು ವರ್ಸಸ್ ರಾಣಿ ಅಬ್ಬಕ್ಕ ಅಂತಾ ಹೇಳುತ್ತಿದ್ದಾರೆ. ಬಿಜೆಪಿ ನಾಯಕರು ಸಮಾಜದ ಸಾಮರಸ್ಯ ಕದಡುವ ಕೆಲಸ ಮಾಡಿದ್ದಾರೆ. ಬಿಜೆಪಿಯಂತೆ ಒಳಗೊಂದು ಹೊರಗೊಂದು ನಾವು ಹೇಳುವುದಿಲ್ಲ. ಕಾಂಗ್ರೆಸ್ ನಲ್ಲಿ ಒಳ್ಳೆಯ ವಾತಾವರಣ ಇದೆ. ಅದಕ್ಕಾಗಿಯೇ ಬಿಜೆಪಿ , ಜೆಡಿಎಸ್ ನವರು ಕಾಂಗ್ರೆಸ್ ಗೆ ಬರುತ್ತಿದ್ದಾರೆ ಎಂದರು.