HomeKarnatakaBIG NEWS: ಮತ್ತೊಂದು ಸ್ಪೋಟಕ ಆರೋಪ ಮಾಡಿದ ಡಿ. ರೂಪಾ

BIG NEWS: ಮತ್ತೊಂದು ಸ್ಪೋಟಕ ಆರೋಪ ಮಾಡಿದ ಡಿ. ರೂಪಾ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೋಟಿಸ್‌ ನೀಡುವಂತೆ ಸೂಚನೆ ನೀಡಿದ್ದರೂ ಸಹ ಐಪಿಎಸ್‌ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರ ನಡುವಿನ ಮಾತಿನ ಕಾಳಗ ನಿಂತಿಲ್ಲ.

ಇದರ ಮಧ್ಯೆ ಖಾಸಗಿ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಬಹಿರಂಗಪಡಿಸಿರುವ ಕುರಿತಂತೆ ರೋಹಿಣಿ ಸಿಂಧೂರಿಯವರ ಪತಿ ಸುಧೀರ್‌ ರೆಡ್ಡಿ ಬೆಂಗಳೂರಿನ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಈಗಲೂ ಕೂಡಾ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ವಾರ್‌ ಮುಂದುವರಿಸಿರುವ ಡಿ. ರೂಪಾ, Get well soon ಅಂತಾ ನನಗೆ ಹೇಳಿದ್ದಾರಲ್ಲ press ನಲ್ಲಿ ಇವತ್ತು ರೋಹಿಣಿ ಸಿಂಧೂರಿ, ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. Number ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, nude, naked pics ಕಳಿಸಬಹುದ?
ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು ಎಂದಿದ್ದಾರೆ. ಅಲ್ಲದೇ ಡಿಲಿಟ್‌ ಆಗಿರುವ ಪೋಸ್ಟ್‌ ಗಳ ಸ್ಕ್ರೀನ್‌ ಶಾಟ್‌ ಒಂದನ್ನು ಡಿ. ರೂಪಾ ಹಾಕಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular