HomeKarnatakaBIG NEWS: ಬೊಗಳೆ ಬಿಡುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮ; ಸಚಿವ ಮುನಿರತ್ನ ವಾಗ್ದಾಳಿ

BIG NEWS: ಬೊಗಳೆ ಬಿಡುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮ; ಸಚಿವ ಮುನಿರತ್ನ ವಾಗ್ದಾಳಿ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯ ಸಣ್ಣ ಕಾರ್ಯಕರ್ತ ಕೂಡ ಕಾಂಗ್ರೆಸ್ ಗೆ ಹೋಗಲ್ಲ ಎಂದು ತೋಟಗಾರಿಕಾ ಸಚಿವ ಮುನಿರತ್ನ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಮುನಿರತ್ನ, ಸಿದ್ದರಾಮಯ್ಯ ಬೊಗಳೆ ಬಿಡುವುದರಲ್ಲಿ ನಿಸ್ಸೀಮ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ 80 ಸೀಟು ಗೆಲ್ಲಲಾಗಿಲ್ಲ, ಈಗ ಹೇಗೆ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಕಾಂಗ್ರೆಸ್, ಜೆಡಿಎಸ್ ಪಕ್ಷ ಬಿಟ್ಟು ಬಂದ ನಾಯಕರ ಮನೆಗಳಿಗೆ ಎಡತಾಕಿ ಕಾಂಗ್ರೆಸ್ ಗೆ ಬನ್ನಿ ಅಂತ ದುಂಬಾಲು ಬಿದ್ದಿದ್ದಾರೆ. ಆದರೆ ಬಿಜೆಪಿಯ ಯಾವ ಒಬ್ಬ ಕಾರ್ಯಕರ್ತ ಕೂಡ ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular