HomeKarnatakaBIG NEWS: ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ಸಿಎಸ್ ಗೆ ದೂರು ನೀಡಿದ ಡಿ.ರೂಪಾ

BIG NEWS: ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ಸಿಎಸ್ ಗೆ ದೂರು ನೀಡಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಮರ ತಣ್ಣಾಗಾಗುವಂತೆ ಕಾಣುತ್ತಿಲ್ಲ. ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ದಾಖಲೆಗಳ ಸಮೇತ ಮುಖ್ಯಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ.

ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಇಂದು ಮಧ್ಯಾಹ್ನ ಸಿಎಸ್ ವಂದಿತಾ ಶರ್ಮಾ ಅವರನ್ನು ಭೇಟಿಯಾಗಿ, ಡಿ.ರೂಪಾ ತಮ್ಮ ವಿರುದ್ಧ ಆರೋಪಗಳನ್ನು ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು.

ಇದರ ಬೆನ್ನಲ್ಲೇ ಈಗ ಐಪಿಎಸ್ ಅಧಿಕಾರಿ ಡಿ.ರೂಪಾ, ಸಿಎಸ್ ವಂದಿತಾ ಶರ್ಮಾ ಅವರನ್ನು ಭೇಟಿಯಾಗಿ ತಾವು ಮಾಡಿದ ಆರೋಪಗಳ ಬಗ್ಗೆ ದಾಖಲೆ ಸಮೇತ ದೂರು ನೀಡಿದ್ದು, ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular