HomeKarnatakaಚುನಾವಣೆ ಹಿನ್ನೆಲೆ: ಹಿಂದುಳಿದ ಜಾತಿಗಳಿಗೆ ಸರ್ಕಾರದ ಕೊಡುಗೆ; ಒಂದೇ ದಿನ ನಾಲ್ಕು ನಿಗಮ ಸ್ಥಾಪನೆ

ಚುನಾವಣೆ ಹಿನ್ನೆಲೆ: ಹಿಂದುಳಿದ ಜಾತಿಗಳಿಗೆ ಸರ್ಕಾರದ ಕೊಡುಗೆ; ಒಂದೇ ದಿನ ನಾಲ್ಕು ನಿಗಮ ಸ್ಥಾಪನೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪದಲ್ಲಿರುವುದರಿಂದ ಹಿಂದುಳಿದ ವರ್ಗಗಳಿಗೆ ನಾಲ್ಕು ನಿಗಮಗಳನ್ನು ಸ್ಥಾಪನೆ ಮಾಡಲಾಗಿದೆ. ಒಂದೇ ದಿನ ನಾಲ್ಕು ನಿಗಮಗಳನ್ನು ಸರ್ಕಾರ ರಚನೆ ಮಾಡಿದೆ.

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ, ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ, ಮಾಳಿ/ ಮಾಲಗಾರ ಸಮಾಜ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಡಿಗ, ಬಿಲ್ಲವ ಸೇರಿದಂತೆ 26 ಜಾತಿಗಳಿಗೆ ನಾರಾಯಣ ಗುರು ನಿಗಮ ಸ್ಥಾಪನೆ ಮಾಡಲಾಗಿದೆ. ಗಾಣಿಗ, ತೇಲಿ, ವನಿಯನ್, ಜ್ಯೋತಿನಗರ ವೈಶ್ಯರಿಗೆ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ.

ಹಡಪದ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular