ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 9,018 ಮಕ್ಕಳು ನಾಪತ್ತೆ ಮತ್ತು ಅಪಹರಣವಾಗಿರುವ ಕುರಿತಂತೆ ದೂರು ದಾಖಲಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಗೃಹ ಸಚಿವರು, ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ವಿಶ್ಲೇಷಿಸಿದರೆ ಸರಾಸರಿ ಶೇಕಡ 10 ರಿಂದ 20 ರಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 12,592 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳ ತನಿಖೆಯನ್ನು 60 ದಿನಗಳ ಕಾಲ ಮಿತಿಯಲ್ಲಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.