HomeKarnatakaBIG NEWS: ಗೃಹ ಸಚಿವರೇ ನಿಮ್ಮ ಇಲಾಖೆ ಸತ್ತು ಹೋಗಿದೆ; ಸದನದಲ್ಲಿ ಸಿದ್ದರಾಮಯ್ಯ ಆಕ್ರೋಶ

BIG NEWS: ಗೃಹ ಸಚಿವರೇ ನಿಮ್ಮ ಇಲಾಖೆ ಸತ್ತು ಹೋಗಿದೆ; ಸದನದಲ್ಲಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದೆ.

ಸಚಿವರ ಹೇಳಿಕೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೊಡಿ, ಬಡಿ ಅಂತಾ ಯಾವ ಧರ್ಮವೂ ಹೇಳಿಕೊಡಲ್ಲ. ಇಂತಹ ಹೇಳಿಕೆಗಳಿಗೆ ನಾನು ಬಗ್ಗುವುದಿಲ್ಲ. ಬಿಜೆಪಿ ನಾಯಕರು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲು ಸಿದ್ಧರಿಲ್ಲ. ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಅಶ್ವತ್ಥನಾರಾಯಣ ಹೇಳಿಕೆ ಪ್ರಚೋದನಕಾರಿ ಹೌದೋ ಅಲ್ವೋ? ಆದರೂ ಸಚಿವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ನಿಮ್ಮ ಇಲಾಖೆ ಸತ್ತು ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular