HomeIndiaಮುಂದಿನ ತಿಂಗಳು ತೇಜಸ್ವಿ ಯಾದವ್ ಬಿಹಾರ ಸಿಎಂ…?

ಮುಂದಿನ ತಿಂಗಳು ತೇಜಸ್ವಿ ಯಾದವ್ ಬಿಹಾರ ಸಿಎಂ…?

ಮಹಾಘಟಂಧನ್ ನಡುವೆ ನಡೆಯುತ್ತಿರುವ ಬಿರುಕುಗಳ ಮಧ್ಯೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆರ್‌ಜೆಡಿ ನಾಯಕ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಂದಿನ ತಿಂಗಳು ಬಿಹಾರದ ಸಿಎಂ ಎಂದು ಘೋಷಿಸಲಿದ್ದಾರೆ ಎಂದು ಆರ್‌ಜೆಡಿ ಶಾಸಕರೊಬ್ಬರು ಹೇಳಿದ್ದಾರೆ.

ಮಾರ್ಚ್ ತಿಂಗಳಲ್ಲಿ ತೇಜಸ್ವಿ ಯಾದವ್ ಅವರನ್ನು ಬಿಹಾರದ ಸಿಎಂ ಆಗಿ ನೇಮಿಸಲಾಗುವುದು. ಸಿಎಂ ನಿತೀಶ್ ಕುಮಾರ್ ಅವರೇ ತೇಜಸ್ವಿ ಅವರಿಗೆ ಉಸ್ತುವಾರಿ ಹಸ್ತಾಂತರಿಸಲಿದ್ದಾರೆ ಎಂದು ದಿನಾರಾ ಶಾಸಕ ವಿಜಯ್ ಮಂಡಲ್ ಮಂಗಳವಾರ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025 ರ ವಿಧಾನಸಭಾ ಚುನಾವಣೆಯನ್ನು ತೇಜಸ್ವಿ ಯಾದವ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ನಿತೀಶ್ ಕುಮಾರ್ ಮೊದಲೇ ಘೋಷಿಸಿದ್ದರು. ಮಾರ್ಚ್ ತಿಂಗಳಲ್ಲಿ ನಿತೀಶ್ ಅವರಿಗೆ ಉಸ್ತುವಾರಿ ವಹಿಸಲಿದ್ದಾರೆ ಎಂದು ಮಂಡಲ್ ಹೇಳಿದ್ದಾರೆ.

ಆದರೆ, ಜೆಡಿಯು ಅಧ್ಯಕ್ಷ ಲಾಲನ್ ಸಿಂಗ್ ಅವರು ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ದೀರ್ಘಾವಧಿ ಇರುವುದರಿಂದ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular