HomeCrimeತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಚಿಕ್ಕಪ್ಪನನ್ನು ಹತ್ಯೆಗೈದ ಯುವಕ

ತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಚಿಕ್ಕಪ್ಪನನ್ನು ಹತ್ಯೆಗೈದ ಯುವಕ

ತನ್ನ ಸಹೋದರ ತೀರಿಕೊಂಡ ಬಳಿಕ ಆತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಲು ಬಯಸಿದ್ದ ವ್ಯಕ್ತಿಯನ್ನು 19 ವರ್ಷದ ಯುವಕ ಕೊಲೆ ಮಾಡಿದ್ದಾನೆ. ಇಂತಹದೊಂದು ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ.

ಫೆಬ್ರವರಿ 18ರಂದು ಸೇತುವೆಯೊಂದರ ಕೆಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಚಿನೋರ್ ಪೊಲೀಸರು ನಡೆಸಿದ ತನಿಖೆ ವೇಳೆ ಶಾಕಿಂಗ್ ಸಂಗತಿ ಬಹಿರಂಗವಾಗಿದೆ.

ಕೊಲೆಯಾದ ವ್ಯಕ್ತಿ, ತನ್ನ ಹಿರಿಯ ಸಹೋದರ ತೀರಿಕೊಂಡ ಬಳಿಕ ಆತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಲು ಬಯಸಿದ್ದ ಎನ್ನಲಾಗಿದೆ. ಇದರಿಂದ ಮನನೊಂದ ಮಹಿಳೆ, 19 ವರ್ಷದ ತನ್ನ ಪುತ್ರನ ಬಳಿ ನೋವು ತೋಡಿಕೊಂಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಆಕ್ರೋಶಗೊಂಡ ಯುವಕ ತನ್ನ ಸ್ನೇಹಿತನ ಜೊತೆ ಸೇರಿ ಚಿಕ್ಕಪ್ಪನನ್ನು ಪಾರ್ಟಿ ಹೆಸರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಕೊಲೆ ಮಾಡಿದ ಬಳಿಕ ಸೇತುವೆ ಕೆಳಗೆ ಶವ ಬಿಸಾಡಿದ್ದು, ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular