HomeIndiaವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಮಾರ್ಚ್ 1 ರಿಂದ ಫೇಸ್ ರೇಕಗ್ನಿಷನ್ ವ್ಯವಸ್ಥೆ ಜಾರಿ

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಮಾರ್ಚ್ 1 ರಿಂದ ಫೇಸ್ ರೇಕಗ್ನಿಷನ್ ವ್ಯವಸ್ಥೆ ಜಾರಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 1 ರಿಂದ ಫೇಶಿಯಲ್ ರೇಕಗ್ನಿಷನ್ ವ್ಯವಸ್ಥೆ ಜಾರಿಗೆ ತರಲು ಟಿಟಿಡಿ ಕ್ರಮಕೈಗೊಂಡಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಟೋಕನ್ ವಿತರಣೆ, ಲಡ್ಡು ವಿತರಿಸುವ ಸ್ಥಳಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗುವುದು. ಪ್ರತಿದಿನ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುತ್ತಾರೆ. ದೇವಾಲಯದಲ್ಲಿ ಟೋಕನ್ ಇಲ್ಲದೆ ದರ್ಶನ ಪಡೆಯುವ ಸ್ಥಳ, ಹೆಚ್ಚಿನ ಟೋಕನ್ ವಿತರಿಸುವ ಸ್ಥಳ, ಲಡ್ಡು ವಿತರಣೆ ಸ್ಥಳ, ಕೊಠಡಿ ಹಂಚಿಕೆ, ಹಣ ಮರುಪಾವತಿ ಮೊದಲಾದ ಕಡೆಗಳಲ್ಲಿ ಫೇಸ್ ರೇಕಗ್ನಿಷನ್ ವ್ಯವಸ್ಥೆ ಅಳವಡಿಸಲು ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವರು ಪದೇ ಪದೇ ಟೋಕನ್, ಲಡ್ಡು ಪಡೆಯುವ ಮೂಲಕ ಭಕ್ತಾದಿಗಳಿಗೆ ತೊಂದರೆ ಕೊಡುತ್ತಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular