
ಬೇಲೂರು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳು ಈ ಮಹತ್ವದ ವಿಷಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ಬೇಲೂರು – ಹಳೇಬೀಡನ್ನು ಯುನೆಸ್ಕೊ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಈ ಕಾರ್ಯ ನಡೆಯಲಿದೆ ಎಂದು ಹೇಳಿದ ಬಸವರಾಜ ಬೊಮ್ಮಾಯಿ, ಇದರಿಂದ ಸ್ಥಳೀಯವಾಗಿ ಸಮಗ್ರ ಅಭಿವೃದ್ಧಿಯಾಗುತ್ತದೆ. ಮೂಲ ಸೌಕರ್ಯ ದೊರೆಯುವ ಜೊತೆಗೆ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

