HomeKarnatakaSHOCKING NEWS: ಬೆಂಕಿ ಹಚ್ಚಿಕೊಂಡು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಯತ್ನ; ಪತ್ನಿ, ಇಬ್ಬರು ಮಕ್ಕಳು ಸಾವು

SHOCKING NEWS: ಬೆಂಕಿ ಹಚ್ಚಿಕೊಂಡು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ ಯತ್ನ; ಪತ್ನಿ, ಇಬ್ಬರು ಮಕ್ಕಳು ಸಾವು

ಚಿಕ್ಕಬಳ್ಳಾಪುರ: ಮಕ್ಕಳೊಂದಿಗೆ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ನಡೆದಿದೆ.

ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪತಿ ಸ್ಥಿತಿ ಗಂಭೀರವಾಗಿದೆ. ಪತ್ನಿ ನೇತ್ರಾವತಿ (37) ಮಕ್ಕಳಾದ ವರ್ಷಿತಾ (12) ಹಾಗೂ ಸ್ನೇಹಾ (9) ಮೃತರು.

ಪತಿ ಸೌನ್ನೇಗೌಡ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ. ಹೆಣ್ಣೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular