ನವದೆಹಲಿ: 300 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತೈಲ ಸೋರಿಕೆಯಿಂದಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ,
ನೆವಾರ್ಕ್(ಯುಎಸ್)-ದೆಹಲಿ ಏರ್ ಇಂಡಿಯಾ ವಿಮಾನ(AI106) ತಾಂತ್ರಿಕ ದೋಷದ ಕಾರಣದಿಂದ ಸ್ವೀಡನ್‌ನ ಸ್ಟಾಕ್‌ಹೋಮ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಎಲ್ಲಾ 300 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದರಿಂದ ಹೆಚ್ಚಿನ ಸಂಖ್ಯೆಯ ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ಇರಿಸಲಾಗಿತ್ತು.
ತೈಲ ಸೋರಿಕೆಯಿಂದಾಗಿ ತಾಂತ್ರಿಕ ದೋಷ ಕಂಡು ಬಂದಿದ್ದು, ಸ್ವೀಡನ್ ನ ಸ್ಟಾಕ್‌ಹೋಮ್ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.