HomeKarnatakaಪ್ರಿಯಕರನ ನಂಬಿ ಗಂಡನಿಗೆ ಡೈವೋರ್ಸ್ ಕೊಟ್ಟ ಯುವತಿಗೆ ಬಿಗ್ ಶಾಕ್

ಪ್ರಿಯಕರನ ನಂಬಿ ಗಂಡನಿಗೆ ಡೈವೋರ್ಸ್ ಕೊಟ್ಟ ಯುವತಿಗೆ ಬಿಗ್ ಶಾಕ್

ಕೋಲಾರ: ಪ್ರಿಯಕರನ ನಂಬಿ ಪತಿಗೆ ವಿಚ್ಛೇದನ ನೀಡಿದ ಯುವತಿ ಅತ್ತ ಗಂಡನೂ ಇಲ್ಲದೇ, ಇತ್ತ ಪ್ರಿಯಕರನೂ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರಿಯಕರನ ಮನೆ ಎದುರು ಕಳೆದ ಎರಡು ದಿನಗಳಿಂದ ನ್ಯಾಯಕ್ಕಾಗಿ ಪ್ರತಿಭಟನೆ ಕೈಗೊಂಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ದೊಡ್ಡಮಲ್ಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಯುವತಿ ಹಾಗೂ ಕಿರಣ್ ಐದಾರು ವರ್ಷಗಳಿಂದ ಪ್ರೀತಿಸಿದ್ದು, ಯುವತಿ ಮನೆಯವರು ಬೇರೆ ಯುವಕನಿಗೆ ಕೊಟ್ಟು ಮದುವೆ ಮಾಡಿದ್ದಾರೆ. ಹೀಗಿದ್ದರೂ ಪ್ರಿಯಕರನೊಂದಿಗೆ ಯುವತಿ ಸಂಪರ್ಕದಲ್ಲಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಡನಿಗೆ ಡೈವೋರ್ಸ್ ಕೊಟ್ಟು ಬಂದರೆ ಮದುವೆಯಾಗುವುದಾಗಿ ಕಿರಣ್ ಹೇಳಿದ್ದಾನೆ. ಅಂತೆಯೇ ಗಂಡನಿಗೆ ವಿಚ್ಛೇದನ ನೀಡಿದ್ದು, ಈಗ ತನ್ನ ಮನೆಯವರು ಒಪ್ಪುತ್ತಿಲ್ಲ ಎಂದು ಕಿರಣ್ ಮದುವೆಯಾಗಲು ನಿರಾಕರಿಸಿದ್ದಾನೆ. ನೊಂದ ಯುವತಿ ಆತನ ಮನೆ ಎದುರು ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular