HomeKarnatakaBIG NEWS: ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲಿಯೂ ಪ್ರಧಾನಿ ಮೋದಿಯೇ ಕಾಣ್ತಾರೆ; ಮಾಜಿ ಸಿಎಂ HDK ವ್ಯಂಗ್ಯ

BIG NEWS: ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲಿಯೂ ಪ್ರಧಾನಿ ಮೋದಿಯೇ ಕಾಣ್ತಾರೆ; ಮಾಜಿ ಸಿಎಂ HDK ವ್ಯಂಗ್ಯ

ಶಿವಮೊಗ್ಗ: ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲಿಯೂ ಮೋದಿಯೇ ಕಾಣುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ರಣದೀಪ್ ಸುರ್ಜೇವಾಲಾ ಅವರಿಗೆ ನಮ್ಮ ಬಗ್ಗೆ ಆ ರೀತಿ ಮಾತನಾಡಲು ನಾಚಿಕೆಯಾಗಬೇಕು. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತಿನ್ನೇನು ಕಾಣಲು ಸಾಧ್ಯ? ಕಾಂಗ್ರೆಸ್ ನಾಯಕರಿಗೆ ನಿದ್ದೆಯಲ್ಲಿಯೇ ಮೋದಿಯೇ ಕಾಣುತ್ತಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಬಿ.ವೈ. ವಿಜಯೇಂದ್ರ ಮಂಡ್ಯದಲ್ಲಿ ಮನೆ ಮಾಡುವ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಶಿವಮೊಗ್ಗದಲ್ಲಿ ಮಾಡಿದಂತೆ ಅರಮನೆ, ವಿದ್ಯಾಸಂಸ್ಥೆಯನ್ನು ಮಾಡಲಿ, ಬೇಡ ಅಂದಿದ್ದು ಯಾರು? ಅವರು ಏನು ಬೇಕಾದರು ಮಾಡಲಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular