ಬಹುನಿರೀಕ್ಷಿತ ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 11ರಂದು ಇದನ್ನು ನೆರವೇರಿಸಲಿದ್ದಾರೆ.
ಹೆದ್ದಾರಿಗೆ ಹೊಂದಿಕೊಂಡಂತೆ ರಾಮನಗರದ ಬಳಿ ನಿರ್ಮಾಣವಾಗಿರುವ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿರುವ ನರೇಂದ್ರ ಮೋದಿಯವರು ಮದ್ದೂರಿನವರೆಗೂ ‘ಎಕ್ಸ್ ಪ್ರೆಸ್ ವೇ’ ನಲ್ಲಿ ಪ್ರಯಾಣ ಮಾಡಲಿದ್ದಾರೆ.
ಈ ಹೆದ್ದಾರಿಯಿಂದಾಗಿ ಬೆಂಗಳೂರು – ಮೈಸೂರಿನ ನಡುವಿನ ಪ್ರಯಾಣದ ಅವಧಿ ಗಣನೀಯವಾಗಿ ಇಳಿಕೆಯಾಗಲಿದ್ದು, ವಾಹನ ಚಾಲಕರಿಗೆ ಅನುಕೂಲವಾಗುವಂತೆ ಟೋಲ್ ದರವನ್ನು ನಿಗದಿಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.