HomeKarnatakaBIG NEWS: ಪ್ರತಿಭಟನೆಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

BIG NEWS: ಪ್ರತಿಭಟನೆಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬೆಂಗಳೂರು: ಪ್ರತಿಭಟನೆಗೆ ಆಗಮಿಸಿದ್ದ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ.

ಶಿಕ್ಷಕ ಶಂಕರಪ್ಪ ಬೋರಡ್ಡಿ (47) ಮೃತರು. ಫ್ರೀಡಂ ಪಾರ್ಕ್ ನಲ್ಲಿ ಅನುದಾನಿತ ಶಾಲಾ ಶಿಕ್ಷಕರ ಪ್ರತಿಭಟನೆ ನಡೆಯುತ್ತಿದ್ದು, ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಶಂಕರಪ್ಪ, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಶಂಕರಪ್ಪ ರಾಯಚೂರು ಮೂಲದ ಸಿಂಧನೂರು ಮೂಲದವರಾಗಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕ ಬಳಿಕ ರೈಲು ನಿಲ್ದಾಣಕ್ಕೆ ಹೋಗಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಶಿಕ್ಷಕನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular