HomeKarnatakaBREAKING: ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ: ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ...

BREAKING: ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ: ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಶಿಫಾರಸು ಜಾರಿ ಬಗ್ಗೆ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ವೇತನ ಆಯೋಗದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ನೌಕರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದ್ದೇನೆ. ಮಾರ್ಚ್ ಒಳಗೆ ಮಧ್ಯಂತರ ವರದಿ ಕೊಡಲು ಸೂಚಿಸುತ್ತೇನೆ. ಮಧ್ಯಂತರ ವರದಿ ಬಂದ ಬಳಿಕ ಮಾರ್ಚ್ ಒಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಧ್ಯಂತರ ವರದಿಯ ಶಿಫಾರಸು ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7ನೇ ವೇತನ ಆಯೋಗ ಈಗಾಗಲೇ ರಚನೆ ಮಾಡಲಾಗಿದೆ. ವೇತನ ಆಯೋಗದಿಂದ ಮಾರ್ಚ್ ಒಳಗೆ ಮಧ್ಯಂತರ ವರದಿ ಪಡೆದು ವರದಿಯ ಶಿಫಾರಸು ಜಾರಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular